ಹುಬ್ಬಳ್ಳಿ: ಮುಂಬರುವ ಫೆಬ್ರುವರಿ ತಿಂಗಳಾಂತ್ಯಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಈಚೆಗೆ ನಡೆದ ಜಿಲ್ಲಾ ಕೋರ್ ಕಮೀಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಅವರು ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದರು.
ಶೀಘ್ರದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಮೀಸಲಾತಿಯನ್ನು ನಿಗದಿಪಡಿ ಸಬೇಕೆಂದು ಸಚಿವರು, ಶಾಸಕರು ಸಂಬಂಧಿಸಿದ ಸಚಿವರಿಗೆ ಆಗ್ರಹಿಸಿದ್ದಾರೆ ಎಂದು ತಿಳಿಸಿದರು.
ಹೊಸ ಅಧ್ಯಾಯ ಬರೆದ ಕೇಂದ್ರ ಸರ್ಕಾರ
ಹುಬ್ಬಳ್ಳಿ: ಕೊರೊನಾ ಸಂಕಷ್ಟದ ಸಮಯದಲ್ಲಿ ವಿಜ್ಞಾನಿಗಳ ವಿಶ್ವಾಸಕ್ಕೆ ತೆಗೆದು ಕೊಂಡು ಸ್ವದೇಶಿ ಲಸಿಕೆ ಕಂಡು ಹಿಡಿದು ಇಡೀ ದೇಶದ ಜನತೆಗೆ ಉಚಿತವಾಗಿ ವರ್ಷದಲ್ಲಿ 156 ಕೋಟಿ ಡೋಸ್ ಲಸಿಕೆ ನೀಡಿ ಮೋದಿ ಸರ್ಕಾರ ಹೊಸ ಅಧ್ಯಾಯ ಬರೆದಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕೊರೊನಾ ಮಹಾಮಾರಿಯಿಂದ ಇಡೀ ವಿಶ್ವ ಸಂಕಷ್ಟದಲ್ಲಿ ಇದ್ದಾಗ ದೇಶವನ್ನು ರಕ್ಷಿಸುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದರು.
ಇ ದೊಡ್ಡ ಪ್ರಮಾಣದಲ್ಲಿ ನಾಗರಿಕರಿಗೆ ಉಚಿತ ಲಸಿಕೆಗಳನ್ನು ಒದಗಿಸುವುದು ಒಂದು ದೊಡ್ಡ ಸಾಧನೆಯಾಗಿದೆ. ಕೈಯಲ್ಲೊಂದು ಗುರುತು ಚೀಟಿಯೂ ಇಲ್ಲದ ಇಲ್ಲಿಯವರೆಗೆ, 67 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗಿದೆ. ಇಲ್ಲಿಯವರೆಗೆ ೬ ಲಕ್ಷಕ್ಕೂ ಹೆಚ್ಚು ಕೈದಿಗಳಿಗೆ ಲಸಿಕೆ ಹಾಕಲಾಗಿದೆ ಎಂದರು.
ದೇಶದ ವಿಜ್ಞಾನಿಗಳ ಏಕೀಕೃತ ಪ್ರಯತ್ನದಿಂದ ಲಸಿಕೆ ಕಂಡು ಹಿಡಿದಿದ್ದು, ಉದ್ಯಮಿಗಳು, ಮುಂಚೂಣಿ ಮತ್ತು ಆರೋಗ್ಯ ಕಾರ್ಯಕರ್ತರು ಈ ಸಾಧನೆ ಕೈಜೋಡಿಸಿದ್ದಾರೆ. ಅವರೆಲ್ಲರಿಗೂ ಬಿಜೆಪಿಯಿಂದ ಅಭಿನಂದನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟ್ಕರ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ವಕ್ತಾರ ರವಿ ನಾಯಕ ಇದ್ದರು.