ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಬ್ಬಳ್ಳಿ: ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ವಿಜಯ ದಶಮಿ ಹಬ್ಬದಂದೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ಹೊರವಲಯದ ಶಿವಳ್ಳಿ ರಸ್ತೆಯ ರೈಲ್ವೆ ಬ್ರಿಡ್ಜ್ ಹತ್ತಿರ 30 ವರ್ಷ ವಯಸ್ಸಿನ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಈ ಹತ್ಯೆ ಹುಬ್ಬಳ್ಳಿಯ ಜನರನ್ನು ಬೆಚ್ಚಿ ಬಿಳಿಸಿದೆ.


ಯುವಕನ ಕುತ್ತಿಗೆ ಭಾಗಕ್ಕೆ ಭೀಕರವಾಗಿ ಇರಿದು ಕೊಲೆಗೈಯ್ಯಲಾಗಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಕೊಲೆಯಾದ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ.
ಸುದ್ದಿ ತಿಳಿದು ಸ್ಥಳಕ್ಕೆ ಎಸಿಪಿ ಬಲಪ್ಪ ನಂದಗಾವಿ, ಅಶೋಕನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಬಿ.ಕೆ.ಪಾಟೀಲ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

administrator

Related Articles

Leave a Reply

Your email address will not be published. Required fields are marked *