ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ.

ಜೂ. ೩೦ರಂದು ನೂತನ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಪ್ರಕಟಣೆ ತಿಳಿಸಿದೆ.

ಇದೀಗ ಚುನಾವಣೆ ದಿನಾಂಕ ಘೋಷಣೆ ಆಗಿದ್ದರಿಂದ ಜೂ. 23ರಂದು ಸಾಮಾನ್ಯ ಸಭೆ ನಡೆಯುವುದು ಅನುಮಾನವಾಗಿದೆ.
ಮಹಾನಗರ ಪಾಲಿಕೆಯಿಂದ ಚುನಾವಣೆ ದಿನಾಂಕ ನಿಗದಿ ಮಾಡುವಂತೆ ಪತ್ರ ರವಾನೆಯಾಗಿದ್ದರಿಂದ ಬೆಳಗಾವಿಯ ಪ್ರಾದೇಶಿಕ ಆಯುಕ್ತರು ದಿನಾಂಕವನ್ನು ಪ್ರಕಟಿಸಿದ್ದಾರೆ.


