ವರಿಷ್ಠರು ತಮಗೆ ಅವಕಾಶ ನೀಡುವ ವಿಶ್ವಾಸ: ಮೋಹನ ಲಿಂಬಿಕಾಯಿ
ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ತಾವೂ ಸಹ ಆಕಾಂಕ್ಷಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಮೋಹನ ಲಿಂಬಿಕಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರ ತಮಗೆ ಹೊಸದೇನಲ್ಲ. ಕ್ಷೇತ್ರವ್ಯಾಪಿ ವ್ಯಾಪಕ ಬೆಂಬಲಿಗರು, ಹಿತೈಷಿಗಳು ಇದ್ದಾರೆ. ಹಿಂದೆ ವಿಧಾನ ಪರಿಷತ್ ಸದಸ್ಯನಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ದೇನೆ. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಹೀಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಯಾಗಿರುವುದಾಗಿ ಹೇಳಿದರು.
ಈ ಬಗ್ಗೆ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದ್ದೇನೆ. ಅವರೂ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪಕ್ಷದ ವರಿಷ್ಠರು ತಮವೆ ಅವಕಾಶ ನೀಡುವ ಭರವಸೆ ಇದೆ ಎಂದರು.