ಹುಬ್ಬಳ್ಳಿ-ಧಾರವಾಡ ಸುದ್ದಿ

ಕಳಸಾ ಬಂಡೂರಿಗೆ ಶೀಘ್ರ ಅನುಮತಿ

ಮುಂದಿನ ತಿಂಗಳಾಂತ್ಯದೊಳಗೆ
ಸುಪ್ರಿಂನಲ್ಲಿನ ವ್ಯಾಜ್ಯ ಅಡ್ಡಿಯಾಗದು

ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ತೆರಳಿ ಸಚಿವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಎಪಿಎಂಸಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಬಗ್ಗೆ ಕೇಂದ್ರ ಜಲಶಕ್ತಿ ಖಾತೆ ಸಚಿವರೊಂದಿಗೆ ಚರ್ಚಿಸಿದ್ದೇನೆ. ಯೋಜನೆಗೆ ಅನುಮೋದನೆ ವಿಚಾರ ಅಂತಿಮ ಘಟ್ಟದಲ್ಲಿದೆ. ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಅಮರಗೋಳದ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಶಂಕರ ಪಾಟೀಲ್ ಮುನೇನಕೂಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕರಾದ ಅಬ್ಬಯ್ಯ ಪ್ರಸಾದ್, ಸಲೀಂ ಅಹಮದ್, ಎ.ಪಿ.ಎಂ.ಸಿ ಅಧ್ಯಕ್ಷ ಸುರೇಶ್ ಎಂ ಕಿರೇಸೂರು, ಉಪಾಧ್ಯಕ್ಷ ಬಸವರಾಜ ನಾಯ್ಕರ್, ಹುಡಾ ಅಧ್ಯಕ್ಷ ನಾಗೇಶ್ ಕಲ್ಬುರ್ಗಿ , ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಚನ್ನು ಹೊಸಮನಿ ಸೇರಿದಂತೆ ಗಣ್ಯರು ಇದ್ದರು.

ನಮ್ಮ ಡಿಪಿಆರ್ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಮಹದಾಯಿ ನದಿ ನೀರು ಹಂಚಿಕೆ ಬಗ್ಗೆ ಮೂರು ರಾಜ್ಯಗಳ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿ ಇದೆ. ಅದು ಕಳಸಾ ಬಂಡೂರಿಗೆ ಅಡ್ಡಿಯಾಗದು. ಮುಂದಿನ ತಿಂಗಳ ಅಂತ್ಯದ ವೇಳೆಗೆ ಅನುಮೋದನೆ ದೊರೆಯುವ ವಿಶ್ವಾಸವಿದೆ. ಆ ಹಿನ್ನೆಲೆಯಲ್ಲಿ ಯೋಜನೆಗೆ ಆಯವ್ಯಯದಲ್ಲಿ 1000 ಕೋಟಿ ರೂ ತೆಗೆದಿರಿಸಲಾಗಿದೆ ಎಂದರು.

ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಜ್ಯದ ಸಚಿವರಾದ ಆರಗ ಜ್ಞಾನೇಂದ್ರ, ಶಂಕರ್‌ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ, ಸಲೀಂ ಅಹ್ಮದ್, ಮಾಜಿ ಶಾಸಕ ವಿ.ಎಸ್.ಪಾಟೀಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಪೊಲೀಸ್ ಆಯುಕ್ತ ಲಾಭುರಾಮ ಮತ್ತು ಇತರರಿದ್ದರು.

ಮೇಕದಾಟು ಯೋಜನೆ ವಿವಾದ 1996 ರಿಂದ ಇದೆ. 2012 ರಲ್ಲಿ ನಾನೇ ಡಿಪಿಆರ್ ಬದಲು ಮಾಡಲು ಕ್ರಮ ಕೈಗೊಂಡಿದ್ದೆ. ಯೋಜನೆಗೆ ಕೇಂದ್ರದ ಅನುಮೋದನೆ ಅವಶ್ಯವಾಗಿದೆ. ಅನುಮೋದನೆ ವಿಶ್ವಾಸದಲ್ಲಿಯೆ ಆಯವ್ಯಯ ದಲ್ಲಿ1000 ಕೋಟಿ ರೂ. ಇರಿಸಿದ್ದು, ವಿನಹ ಕಾಂಗ್ರೆಸ್‌ನ ಹೋರಾಟ ಕಾರಣಕ್ಕಾಗಿ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೃಷ್ಣ ಮೇಲ್ದಂಡೆ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆ ಘೋಷಣೆ ಬೇಡಿಕೆ ಇದೆ. ಇದಕ್ಕೆ ಕೆಲವೊಂದು ಮಾನದಂಡಗಳಿದ್ದು, ತಾಂತ್ರಿಕ ವರದಿ ಸಿದ್ದಪಡಿಸಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

administrator

Related Articles

Leave a Reply

Your email address will not be published. Required fields are marked *