ಹುಬ್ಬಳ್ಳಿ-ಧಾರವಾಡ ಸುದ್ದಿ

ಜನಪ್ರತಿನಿಧಿಗಳ ಸಂಬಳ ಭತ್ಯೆ ಏರಿಕೆ ತಪ್ಪು

ಹುಬ್ಬಳ್ಳಿ: ಕೋವಿಡ್‌ನಿಂದಾಗಿ ಜನರು ಸಂಕಷ್ಟ ಎದುರಿಸುತ್ತಿರುವಾಗ ಶಾಸಕರ, ಸಚಿವರ ಗೌರವ ಧನ ಹಾಗೂ ಭತ್ಯೆ ಹೆಚ್ಚಳ ಮಾಡಿರುವುದು ಸರಿಯಲ್ಲ. ಅದನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಂತ ಕುಮಾರ ಬುಗಡಿ, ಯಾವುದೇ ಚರ್ಚೆ ಮಾಡದೆ ಗೌರವ ಧನ, ಭತ್ಯೆ ಹೆಚ್ಚಳ ಮಾಡಿರುವುದು ಸರಿಯಲ್ಲ. ಕೋವಿಡ್‌ನಿಂದ ಜನರು ಕೆಲಸ ಕಳೆದುಕೊಂಡಿ ರುವಾಗ ಏರಿಕೆ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿದರು.
ಬಿಜೆಪಿ, ಕಾಂಗ್ರೆಸ್ ಕೃಷಿ ಕಾಯ್ದೆ ರದ್ದು ಪಡಿಸುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿಲ್ಲ. 7 ಸಾವಿರ ಅತಿಥಿ ಉಪನ್ಯಾಸಕರು ನೌಕರಿ ಕಳೆದುಕೊಂಡಿ ದ್ದಾರೆ. ಈ ಬಗ್ಗೆಯೂ ಚರ್ಚೆ ಮಾಡಿಲ್ಲ. ಜನರ ಸಾಮಾನ್ಯರ ಸಮಸ್ಯೆಗಳನ್ನು ಬದಿಗಿಟ್ಟು ತಮ್ಮ ಹಿತಾಸಕ್ತಿ ಕಾಯ್ದುಕೊಂಡಿದ್ದಾರೆ ಎಂದು ಟೀಕಿಸಿದರು.
ಡೀಸೆಲ್, ಪೆಟ್ರೋಲ್, ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಳದಿಂದ ಜನರು ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಅಡುಗೆ ಅನಿಲ ಬೆಲೆಯೂ ಏರಿಕೆಯಾಗಲಿದೆ. ಇದಕ್ಕೆ ಸರ್ಕಾರದ ಬಳಿ ಪರಿಹಾರವಿದೆಯೇ ಎಂದು ಪ್ರಶ್ನಿಸಿದರಲ್ಲದೇ, ಜನಪರ ಸಮಸ್ಯೆಗಳ ಪರಿಹಾರಕ್ಕೆ ಹಣಕಾಸಿನ ತೊಂದರೆ ಇದೆ ಎನ್ನುವವರು ತಮ್ಮ ಗೌರವ ಧನ ಏರಿಕೆಗೆ ಮುಂದಾಗಿದ್ದು ಸರಿಯಲ್ಲ ಎಂದರು.
ಉಪಾಧ್ಯಕ್ಷರಾದ ವಿಕಾಸ ಸೊಪ್ಪಿನ, ಪ್ರವೀಣ ನಡಕಟ್ಟಿನ, ಜಿಲ್ಲಾ ವಕ್ತಾರ ರೇವಣಸಿದ್ದಪ್ಪ ಹುಬ್ಬಳ್ಳಿ ಇದ್ದರು.

administrator

Related Articles

Leave a Reply

Your email address will not be published. Required fields are marked *