ಹುಬ್ಬಳ್ಳಿ-ಧಾರವಾಡ ಸುದ್ದಿ

ಈದ್ಗಾದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ

ಮೆರವಣಿಗೆಯಲ್ಲಿ ಪಂಚವಾದ್ಯ, ಡೋಲು, ಜಾಂಝ್ ಮೇಳ

ಬಿಜೆಪಿ, ಆರ್‌ಎಸ್‌ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಎಚ್.ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆ ಸಾಥ್

ಉಪನಗರ ಠಾಣೆಯ ಮೂರನೇ ಮಹಡಿಯಿಂದ ಗಣೇಶೋತ್ಸವದ ಮೇಲೆ ಗುಪ್ತಚರ ಇಲಾಖೆ ಐಜಿ ಲಾಬುರಾಮ ಹದ್ದಿನ ಕಣ್ಣು

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿಯನ್ನು ಬೆಳಿಗ್ಗೆ 11.30ಕ್ಕೆ ಪ್ರತಿಷ್ಠಾಪನೆ ಮಾಡಲಾಯಿತು.
ಇದಕ್ಕೂ ಮುಂಚೆ ಗಣೇಶಮೂರ್ತಿ ಮೆರವಣಿಗೆ ಮೂರುಸಾವಿರ ಮಠದ ಆವರಣದಿಂದ ಆರಂಭವಾಯಿತು.


ಮೆರವಣಿಗೆ ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ ಮುಖಾಂತರ ರಾಯಣ್ಣ ವೃತ್ತಕ್ಕೆ ಬಂದು ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪಂಚವಾದ್ಯ, ಡೋಲು, ಜಾಂಝ್ ಮೇಳಗಳು ಪಾಲ್ಗೊಂಡಿದ್ದವು.


ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಧ್ವಜ, ಕೇಸರಿ ಬಾವುಟಗಳು ರಾರಾಜಿಸಿದವು. ಬಿಜೆಪಿ, ಆರ್‌ಎಸ್‌ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಎಚ್.ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದರು.


ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಡಿಸಿಪಿ ರಾಜೀವ್ ಎಂ. ನೇತೃತ್ವ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಬಂದೋಬಸ್ತಗಾಗಿ ಇಬ್ಬರು ಡಿಸಿಪಿ, 6 ಜನ ಎಸಿಪಿ ಹಾಗೂ 385 ಪೇದೆ, ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.


ಕಳೆದ ಎರಡು ದಿನಗಳಿಂದ ನಗರದಲ್ಲಿ ಮೊಕ್ಕಾಂಮ ಹೂಡಿರುವ ಗುಪ್ತಚರ ಇಲಾಖೆ ಐಜಿ ಲಾಬುರಾಮ ಅವರು ಉಪನಗರ ಠಾಣೆಯ ಮೂರನೇ ಮಹಡಿಯಲ್ಲಿರುವ ಕ್ಯಾಂಪ್ ಕಚೇರಿಯಲ್ಲಿ ಕುಳಿತು ಈದ್ಗಾ ಗಣೇಶೋತ್ಸವದ ಮೇಲೆ ಕಣ್ಣು ಇಟ್ಟಿದ್ದಾರೆ.


ಮೆರವಣಿಗೆಯಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ವಕೀಲ ಸಂಜಯ ಬಡಸ್ಕರ, ರವಿ ನಾಯಕ, ಸುಭಾಸಸಿಂಗ್ ಜಮಾದಾರ, ವಿಠ್ಠಲ ಲದ್ವಾ, ಮೇಯರ್ ವೀಣಾ ಬರದ್ವಾಡ, ಬಿರಪ್ಪ ಕಂಡೇಕರ, ಜಯತೀರ್ಥ ಕಟ್ಟಿ, ಕಿಶನ ಬೆಳಗಾವಿ, ದತ್ತಮೂರ್ತಿ ಕುಲಕರ್ಣಿ, ಸತೀಶ ಶೆಜವಾಡಕರ್, ಡಿ.ಗೋವಿಂದರಾವ್, ಸಂತೋಷ ಚವ್ಹಾಣ, ಮಹೇಂದ್ರ ಕೌತಾಳ ಸೇರಿದಂತೆ ಸಾವಿರಾರು ಜನ ಭಕ್ತರು ಇದ್ದರು.

administrator

Related Articles

Leave a Reply

Your email address will not be published. Required fields are marked *