ಧಾರವಾಡ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಶಹರ ಠಾಣೆಯ ಪೊಲೀಸರು ನಾಲ್ವರು ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆನ್ನಲಾಗಿದೆ.
ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
ಇಲ್ಲಿನ ಲಕ್ಷ್ಮೀಸಿಂಗನಕೇರಿಯ ಅಪ್ರಾಪ್ತಳ ಮೇಲೆ ಅದೇ ಬಡಾವಣೆಯ ಆರು ಯುವಕರು ನಾಲ್ಕು ದಿನಗಳ ಹಿಂದೆ ನಗರದ ಹೊರವಲಯಕ್ಕೆ ಒತ್ತಾಯದಿಂದ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆನ್ನಲಾಗಿದೆ. ಅಲ್ಲದೇ ಮೊಬೈಲ್‌ನಿಂದ ವಿಡಿಯೋ ಕೂಡ ಮಾಡಿದ್ದರು ಎಂದು ಗೊತ್ತಾಗಿದೆ.
ಅತ್ಯಾಚಾರ ಎಸಗಿರುವ ಆರೋಪಿಗಳು ಕೂಡ ಅಪ್ರಾಪ್ತರಾಗಿದ್ದು, ಆರು ಜನರ ವಿರುದ್ಧ ದೂರು ದಾಖಲಾಗಿದೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಸ್ವತಃ ಎಸಿಪಿ ಅನುಷಾ ಜಿ ಮತ್ತು ಸಿಪಿಐ ಸಂಗಮೇಶ ದಿಡಿಗಿನಾಳ ನೇತೃತ್ವದಲ್ಲಿ ಸಿಬ್ಬಂದಿಯು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಬೆನ್ನು ಬಿದ್ದಿದ್ದಾರೆ.