200 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿ
ಹುಬ್ಬಳ್ಳಿ: ಡೆಮಾಕ್ರಸಿ ಡೆವಲಪಮೆಂಟ್ ಟ್ರಸ್ಟ್‌ನ ಮಿಷನ್ ಮೋದಿ ಅಗೇನ್ ಪಿಎಂ ಹುಬ್ಬಳ್ಳಿ ಘಟಕದ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳ ಕುರಿತು ಎರಡು ದಿನಗಳ ಮಿಷನ್ ಮೋದಿ ತರಬೇತಿ ಕಾರ್ಯಾಗಾರ ಇಲ್ಲಿನ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಾಳೆ ಹಾಗೂ ನಾಡಿದ್ದು ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿಂದು ಮಿಷನ್ ಮೋದಿ ಸಂಘಟನೆಯ ರಾಜ್ಯಾಧ್ಯಕ್ಷ ಗೋವಿಂದ ಕುಲಕರ್ಣಿ, ಹುಬ್ಬಳ್ಳಿಯ ಎಸ್.ಎಸ್. ಶೆಟ್ಟರ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಾಗಾರ ನಡೆಯಲಿದ್ದು,18 ರಂದು ಬೆಳಿಗ್ಗೆ 11.30 ಕ್ಕೆ ತರಬೇತಿ ಕಾರ್ಯಾಗಾರವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬಸವರಾಜ ಹೊರಟ್ಟಿ, ನಗರದ ಖ್ಯಾತ ನರರೋಗ ತಜ್ಞ ಡಾ. ಕ್ರಾಂತಿಕಿರಣ, ಮಧುಮೇಹ ತಜ್ಞ ಡಾ. ಜಿ.ಬಿ. ಸತ್ತೂರ ಮತ್ತು ಡಾ. ಅಮಿತ ಸತ್ತೂರ, ತಾವು ಅಲ್ಲದೇ ಕಾರ್ಯಾಧ್ಯಕ್ಷ ವೀರಣ್ಣ ಶೆಟ್ಟರ, ರಾಜ್ಯ ಮಹಿಳಾ ಅಧ್ಯಕ್ಷೆ ಹಲೆನ್ ಮೈಸೂರ ಭಾಗವಹಿ ಸುವರು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಮುಖ್ಯವಕ್ತಾರರಾಗಿ ಪಾಲ್ಗೊಳ್ಳಲಿರುವ ರಾಷ್ಟ್ರೀಯ ಅಧ್ಯಕ್ಷ ರಾಮಗೋಪಾಲ ಕಾಕಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯರ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಸಂಘಟನೆ ಶ್ರಮಿಸುತ್ತಿದೆ ಎಂದರು.
ರಾಜ್ಯ ಕಾರ್ಯಾಧ್ಯಕ್ಷ ವೀರಣ್ಣ ಶೆಟ್ಟರ ಉತ್ತರ ಕರ್ನಾಟಕದ ವಿವಿಧೆಡೆಯಿಂದ ಸುಮಾರಕ್ಕೂ 200 ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆಂದರು.
ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಹಲೆನ್ ಮೈಸೂರು, ಜಿಲ್ಲಾಧ್ಯಕ್ಷ ಸಂಜಯ ರಾಂಕಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಬನ್ನಿಕೊಪ್ಪ ಇದ್ದರು.