ಧಾರವಾಡ: ವಿಧಾನ ಪರಿಷತ್ತಿನ ಧಾರವಾಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶೇ. 63 ರಷ್ಟು ಮತದಾನವಾಗಿತ್ತು.
ಕ್ಷೇತ್ರದ ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಅತ್ಯಂತ ಚುರುಕಿನಿಂದ ಮತದಾನ ಆರಂಭವಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಮತದಾನ ಮಾಡಿದರೆ, ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನವಲಗುಂದದಲ್ಲಿ ಮತದಾನ ಮಾಡಿದರು.
ಹುಬ್ಬಳ್ಳಿ ಪಾಲಿಕೆ ಕಚೇರಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಶಾಯಿ, ಎಸ್.ವಿ.ಸಂಕನೂರ, ಹಾಲಿ ಪರಿಷತ್ ಸದಸ್ಯ, ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. ಧಾರವಾಡ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರು ತಮ್ಮ ಕ್ಷೇತ್ರದಲ್ಲಿ ಮತದಾನ ಮಾಡಿದರು.
ಗದಗ ಹಾಗೂ ಹಾವೇರಿ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹಕ್ಕು ಚಲಾಯಿಸಿದರು.
ಕ್ಷೇತ್ರದ ಚುನಾವಣಾಧಿಕಾರಿಗಳು ಆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಧಾರವಾಡ ತಾಲೂಕಿನ ಮನಸೂರ ಗ್ರಾಮ ಪಂಚಾಯತಗೆ ತೆರಳಿ ಮತದಾನ ಪ್ರಕ್ರಿಯೆ ವೀಕ್ಷಿಸಿದರು.
ಮಧ್ಯಾಹ್ನದ ವರೆಗೂ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ಮುಂದುವರೆ ದಿತ್ತು. ಮತದಾನ ಸ್ಥಗಿತ ಅಥವಾ ಇನ್ನಾವುದೇ ಅವಘಡಗಳು ನಡೆದ ವರದಿಯಾಗಿಲ್ಲ.
3 ಗಂಟೆಯವರೆಗೆ
ವಿಧಾನ ಪರಿಷತ್ತಿನ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ
ಧಾರವಾಡ ಜಿಲ್ಲೆ -68.98%
ಹಾವೇರಿ ಜಿಲ್ಲೆ- 88.93%
ಗದಗ ಜಿಲ್ಲೆ- 92.93 %
ಒಟ್ಟು – ಶೇ.84.06 ರಷ್ಟು ಮತದಾನವಾಗಿದೆ