ಹುಬ್ಬಳ್ಳಿ-ಧಾರವಾಡ ಸುದ್ದಿ
ಹರ-ಗುರು ಚರ ಮೂರ್ತಿಗಳ ಸಾನಿಧ್ಯದಲ್ಲಿ ಜೆಎಸ್‌ಎಸ್ ಕಟ್ಟಡಗಳ ಭೂಮಿಪೂಜೆ

ಹರ-ಗುರು ಚರ ಮೂರ್ತಿಗಳ ಸಾನಿಧ್ಯದಲ್ಲಿ ಜೆಎಸ್‌ಎಸ್ ಕಟ್ಟಡಗಳ ಭೂಮಿಪೂಜೆ

ಧಾರವಾಡ: ಇಲ್ಲಿನ ತಪೋವನ ಬಳಿಯ ಜೆಎಸ್ ಎಸ್ ಆವರಣದಲ್ಲಿ ವಾಕ್ ಮತ್ತು ಶ್ರವಣ ವಿದ್ಯಾಲಯದ ಮತ್ತು ವಿದ್ಯಾರ್ಥಿ ನಿಲಯದ ನೂತನ ಕಟ್ಟಡಗಳ ಭೂಮಿ ಪೂಜಾ ಕಾರ್ಯಕ್ರಮ ಬೆಳಿಗ್ಗೆ ಜರುಗಿತು.
ಕೆಲಗೇರಿ ಕೆರೆಯ ದಂಡೆಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯ ಆವರಣದಲ್ಲಿ ಜರುಗಿದ ವರ್ಣರಂಜಿತ ಸಮಾರಂಭದಲ್ಲಿ ನಾಡಿನ ಹರ-ಗುರು ಚರ ಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ ಗಣ್ಯರು ಭೂಮಿ ಪೂಜೆ ನೆರವೇರಿಸಿದರು.


ಮೈಸೂರಿನ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗದಗ ತೋಂಟದಾರ್ಯ ಮಠದ ಡಾ.ಸಿದ್ಧರಾಮ ಸ್ವಾಮೀಜಿ, ಮೂರುಸಾವಿರ ಮಠದ ಡಾ. ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ, ಸದಾಶಿವ ಸ್ವಾಮೀಜಿ, ಮುಧೋಳದ ಹರ್ಷಾನಂದ ಸ್ವಾಮೀಜಿ, ಮುರಗೋಡದ ಮಹಾಂತ ಸ್ವಾಮೀಜಿ, ಆಲಮಟ್ಟಿಯ ರುದ್ರಮುನಿ ಸ್ವಾಮೀಜಿ,ಉಪ್ಪಿನ ಬೆಟಗೇರಿಯ ಕುಮಾರ ವಿರುಪಾಕ್ಷ ಸ್ವಾಮೀಜಿ, ಕುಂದರಗಿಯ ಅಮರೇಶ್ವರ ಸ್ವಾಮೀಜಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮನಗುಂಡಿಯ ಬಸವಾನಂದ ಸ್ವಾಮೀಜಿ, ಹೊಸಮಠದ ಚಂದ್ರಶೇಖರ ಸ್ವಾಮೀಜಿ, ನೀಲಕಂಠ ಸ್ವಾಮೀಜಿ, ಸಭಾಪತಿ ಬಸವರಾಜ ಹೊರಟ್ಟಿ,

ಶ್ರೀರಾಮ ಸೇನಾ ಮುಖಂಡ ಪ್ರಮೋದ ಮುತಾಲಿಕ, ಶಾಸಕ ಸಿ.ಎಂ. ನಿಂಬಣ್ಣವರ, ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಮಾಜಿ ಸಂಸದರಾದ ಮಂಜುನಾಥ ಕುನ್ನೂರ, ಪ್ರೊ.ಐ.ಜಿ.ಸನದಿ, ಮಾಜಿ ಶಾಸಕರಾದ ಜಿ.ಎಸ್.ಗಡ್ಡದೇವರಮಠ, ಸೀಮಾ ಮಸೂತಿ, ಮೋಹನ ಲಿಂಬಿಕಾಯಿ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಓ ಡಾ.ಸುರೇಶ ಇಟ್ನಾಳ, ಸಾಹಿತಿಗಳಾದ ಡಾ.ಗುರುಲಿಂಗ ಕಾಪಸೆ, ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ವಿಶ್ರಾಂತ ಕುಲತಿಗಳಾದ ಬಿ.ಜಿ.ಮೂಲಿಮನಿ, ಡಾ.ಎಸ್.ಕೆ.ಪ, ಪ್ರೊ. ಎಸ್.ಬಿ. ಹಿಂಚಿಗೇರಿ, ಗಣ್ಯರಾದ ಪಿ.ಎಚ್.ನೀರಲಕೇರಿ, ಶಿವಣ್ಣ ಬೆಲ್ಲದ, ಶಶಿಧರ ಯಲಿಗಾರ, ಶಾಕೀರ ಸನದಿ, ಇಮ್ರಾನ ಕಳ್ಳಿಮನಿ, ಪಂ.ವೆಂಕಟೇಶಕುಮಾರ
ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿದ್ದರು.

administrator

Related Articles

Leave a Reply

Your email address will not be published. Required fields are marked *