ಹುಬ್ಬಳ್ಳಿ-ಧಾರವಾಡ ಸುದ್ದಿ
ಸಿದ್ದು-ಡಿಕೆಶಿ ಜೋಡೆತ್ತಲ್ಲ ಕಾಡೇತ್ತು: ಕಟೀಲ್ ವ್ಯಂಗ್ಯ

ಸಿದ್ದು-ಡಿಕೆಶಿ ಜೋಡೆತ್ತಲ್ಲ ಕಾಡೇತ್ತು: ಕಟೀಲ್ ವ್ಯಂಗ್ಯ

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೋಡೆತ್ತಲ್ಲ ಅವರು ಕಾಡೇತ್ತು ಆಗಿದ್ದಾರೆ. ಹೀಗಾಗಿ ಅವರು ಒಬ್ಬರಿಗೊಬ್ಬರು ಕಾದಾಟ ಶುರುಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ವ್ಯಂಗ್ಯವಾಡಿದರು.


ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕಟೀಲ್ ಅವರು, ನಮ್ಮ ಪ್ರಧಾನಿ ಸಬ್ ಕಾ ಸಾತ್ ಸಬ್ ವಿಕಾಸ್ ಅಂದ್ರೆ, ಸಿದ್ದರಾಮಯ್ಯ ನವರದ್ದು ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಆಗಿದ್ದು, ಇದೀಗ ಅವರಿಗೆ ಸೋಲೋ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಾರು ಹೇಳಿ ಪ್ರಶ್ನಿಸಿದ ಕಟೀಲ್ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ. ಅವರಿಗೆ ಪಕ್ಷವೇ ಮುನ್ನೆಡಿಸೋಕೆ ಆಗ್ತಲ್ಲ ದೇಶ ಮುನ್ನಡೆಸುತ್ತಾರಾ, ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ರಾಹುಲ್ ವಿರುದ್ದ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ ಎರಡು ಹೋಳಾಗಿ ಹೋಗುತ್ತದೆ. ಜೆಡಿಎಸ್ ಕುಟುಂಬ ರಾಜಕೀಯ ಮಾಡುತ್ತಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ ಎಂದರು.


ಇತ್ತ ಕೆಪಿಸಿಸಿ ರಾಜ್ಯಾಧ್ಯಕ್ಷ ತಿಹಾರ್ ಜೈಲಿಗೆ ಹೊಗಿದ್ದರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಜೈಲಿಗೆ ಹೋದ್ರಾ..?. ಇಲ್ಲಾ ಸಂಗ್ರಾಮದ ಕಥೆ ಬರೆಯಲು ಹೋಗಿದ್ರಾ..?. ಡಿಕೆಶಿ ಮತ್ತು ಸಿದ್ದರಾಮಯ್ಯ ಜಗಳ ಮುಂದಿನ ಚುನಾವಣೆವರೆಗೂ ಮುಂದುವರೆಯತ್ತದೆ ಎಂದು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು. ಅವರ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದರು.

ಎಚ್‌ಡಿಕೆಗೆ ಕಟಿಲ್ ಟಾಂಗ್

ಹುಬ್ಬಳ್ಳಿ: ಜೀವನ ಪೂರ್ತಿ ತಂದೆ ಮಕ್ಕಳು ಕುಟುಂಬ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಕುಟುಂಬ ರಾಜಕಾರಣದ ಹಳದಿ ರೋಗ ಬಂದವನಿಗೆ ಎಲ್ಲವೂ ಹಳದಿ ಕಾಣಿಸುತ್ತಿದೆ ಎಂದು ಕುಮಾರಸ್ವಾಮಿ ಬಗ್ಗೆ ನಳೀನಕುಮಾರ ಕಟೀಲ್ ವ್ಯಂಗವಾಡಿದರು.
ಹೆಚ್.ಡಿ.ಕುಮಾರಸ್ವಾಮಿ ಆರ್.ಎಸ್.ಎಸ್ ಟೀಕೆ ವಿಚಾರವಾಗಿ, ಕುಮಾರಸ್ವಾಮಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಕೆಪಿಎಸ್‌ಸಿಯಿಂದ ಹಿಡಿದು ಒಂದು ಇಲಾಖೆಯ ಗುಮಾಸ್ತ ನವರೆಗೂ ಕುಟುಂಬದವರನ್ನು ಇಟ್ಟಿದ್ದರು. ಮೊದಲು ಕುಮಾರಸ್ವಾಮಿ ಆರ್.ಎಸ್.ಎಸ್ ಶಾಖೆಗೆ ಬರಬೇಕು. ಅವರಿಗೆ ಈಗಾಗಲೇ ಶಾಖೆಗೆ ಬರಲು ಕರೆಕೊಟ್ಟಿದ್ದೇನೆ. ಎರಡು ದಿನ ಶಾಖೆಗೆ ಬರಲಿ, ಶಾಖೆ ಎಂದರೆ ಏನು? ಅದು ಏನು ಕಲಿಸುತ್ತದೆ ಎಂಬುದನ್ನು ಅರಿಯಲಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತವಲ್ಲದೇ ಪ್ರಪಂಚದ ೧೫೦ ದೇಶದಲ್ಲಿ ಸೇವಾ ಕಾರ್ಯ ಮಾಡುತ್ತಿದೆ. ಪ್ರತಿಯೊಬ್ಬರಲ್ಲೂ ದೇಶಭಕ್ತಿಯ ಜಾಗೃತಿ ಮೂಡಿಸುತ್ತಿದೆ ಎಂದರು.

ಬಿಎಸ್‌ವೈ ಸರ್ವಶ್ರೇಷ್ಠ ನಾಯಕ

ಹುಬ್ಬಳ್ಳಿ: ಬಿಜೆಪಿ ಪಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದ್ದೆಯೇ ಎಂಬ ಪ್ರಶ್ನೆಗೆ, ಬಿ.ಎಸ್.ಯಡಿಯೂರಪ್ಪ ಬಿಜೆಪಿಯ ಸರ್ವಶ್ರೇಷ್ಠ ನಾಯಕರಾಗಿದ್ದು, ಅವರನ್ನು ಕಡೆಗಣಿಸುವ ಪ್ರಶ್ನೆ ಇಲ್ಲಾ. ಮುಂದಿನ ಎರಡು ದಿನ ಹಾನಗಲ್ ಪ್ರಚಾರ ಮತ್ತು ಮುಂದಿನ ಎರಡು ದಿನ ಸಿಂಧಗಿಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದರು.
ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದ ಇಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸಿಂಧಗಿ ಪ್ರಚಾರದಲ್ಲಿ ಮುಖ್ಯಮಂತ್ರಿಗಳು ಜೊತೆ ಭಾಗವಹಿಸುತ್ತೇನೆ. ಎರಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

administrator

Related Articles

Leave a Reply

Your email address will not be published. Required fields are marked *