ಹುಬ್ಬಳ್ಳಿ-ಧಾರವಾಡ ಸುದ್ದಿ
ಬಿಜೆಪಿಯಲ್ಲಿ ಹಿರಿಯರ ಮೂಲೆಗುಂಪಾಗಿಸುವ ವ್ಯವಸ್ಥಿತ ಷಡ್ಯಂತ್ರ

ಬಿಜೆಪಿಯಲ್ಲಿ ಹಿರಿಯರ ಮೂಲೆಗುಂಪಾಗಿಸುವ ವ್ಯವಸ್ಥಿತ ಷಡ್ಯಂತ್ರ

ಪಂಚರಾಜ್ಯಗಳ ಮೇಲೂ ತಮ್ಮ ಪಕ್ಷಾಂತರ ಪರಿಣಾಮ

ಕಮಲ ಪಡೆಗೆ ಹೀನಾಯ ಸ್ಥಿತಿ ಆಪರೇಷನ ಕಮಲ ಸಫಲವಾಗಲ್ಲ

ಹುಬ್ಬಳ್ಳಿ: ನನ್ನ ಪಕ್ಷಾಂತರದ ಪರಿಣಾಮ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದ್ದು, ಹಾಗಾಗಿಯೇ ಅಲ್ಲಿ 80 ವರ್ಷ ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರ ಜತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ ಬಹಳ ಹಿಂದಿನಿಂದಲೂ ನಡೆದಿದೆ
ಪಕ್ಷಕ್ಕಾಗಿ ಸಂಘಟನೆ ಮಾಡಿದವರನ್ನು, ದುಡಿದವರನ್ನು ದೂರವಿಡಲಾಗುತ್ತಿದೆ. ಸದಾನಂದ ಗೌಡರನ್ನು ದೆಹಲಿಗೆ ಕರೆಯಿಸಿ ಮೂರು ದಿನ ಕಾಯಿಸಿದರು.
ಐದು ನಿಮಿಷ ಮಾತನಾಡುವಷ್ಟು ಸೌಜನ್ಯವನ್ನು ತೋರಲಿಲ್ಲ ಎಂದರು.

ಬಿಜೆಪಿ ಹಿರಿಯರನ್ನು ನಡೆಸಿಕೊಳ್ಳುವ ರೀತಿಗೆ ಇದೊಂದು ಉದಾಹರಣೆ ಹಿಂದೆ ಎಲ್ ಕೆ ಅಡ್ವಾಣಿ, ಮುರುಳಿಮನೋಹರ ಜೋಷಿ ಮೊದಲಾದವರಿಗೆ ರಾಜಕೀಯ ನಿವೃತ್ತಿ ಕೊಟ್ಟುಬಿಟ್ಟರು.ನನಗೆ, ಲಕ್ಷ್ಮಣ್ ಸವದಿ ಮತ್ತು ಈಶ್ವರಪ್ಪಗೆ ಕರ್ನಾಟಕದಲ್ಲಿ ಟಿಕೆಟ್ ಕೊಡಲಿಲ್ಲ. ನನಗೆ ಟಿಕೆಟ್ ತಪ್ಪಿಸಲು ಏನು ಕಾರಣ ಅಂತ ಇದುವರೆಗೂ ಹೇಳಿಲ್ಲಇದರ ಪರಿಣಾಮ ಏನಾಯ್ತು ಅಂತ ಇಡೀ ಜಗತ್ತಿಗೆ ಗೊತ್ತಿದೆ ಎಂದರು.
ಬಿಜೆಪಿ ವರಿಷ್ಠರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಅನ್ನೋ ಆಸೆ ಆದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು.ಹಾಗಾಗಿಯೇ
ಪಂಚ ರಾಜ್ಯಗಳ ಚುನಾವಣೆಯಲ್ಲಿ ಹಿರಿಯರಿಗೆ ಮಣೆ ಹಾಕಲಾಗಿದೆ. 70-75 ವಯಸ್ಸಾದಂತವರಿಗೂ ಟಿಕೆಟ್ ನೀಡಲಾಗಿದೆ. ಅವರಿಗೆ ಯಾಕೆ ಟಿಕೆಟ್ ಕೊಟ್ಟರು ಎಂಬುದನ್ನು ಆ ಪಕ್ಷದ ವರಿಷ್ಠರೇ ಹೇಳಬೇಕು. ನಿಯಮ ಎಲ್ಲರಿಗೂ ಒಂದೇ ಅನ್ವಯ ಆಗಬೇಕಲ್ಲವೇ ಎಂದು ಪ್ರಶ್ನಿಸಿದರಲ್ಲದೇ
ಅಧಿಕಾರ ಆಸೆಯಲ್ಲಿ ಅವರು ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ ಎಂದರು.

ಕಮಲ ಪಡೆಗೆ ಹೀನಾಯ ಸ್ಥಿತಿ ಆಪರೇಷನ ಕಮಲ ಸಫಲವಾಗಲ್ಲ

ಹುಬ್ಬಳ್ಳಿ : ರಾಜ್ಯ ಬಿಜೆಪಿಯ ಸ್ಥಿತಿ ಅತ್ಯಂತ ಮಟ್ಟ ತಲುಪಿದೆ. ಅಲ್ಲಿ ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ.ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ ಇದು ವಾಸ್ತವಕ್ಕೆ ಹಿಡಿದ ಕೈಗನ್ನಡಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.

ಮಾಧ್ಯದವರೊಡನೆ ಮಾತನಾಡುತ್ತಾ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರುವುದು ಅವರಿಗೆ ಬಿಟ್ಟ ವಿಚಾರ. ನಮ್ಮ ಅಭ್ಯಂತರವಿಲ್ಲ.ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು ಮಾಡಿದ್ದಾರೆ ಆದರೆ ರಾಜ್ಯಾಧ್ಯಕ್ಷ ಸ್ಥಾನಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತು.ಅದು ಕಾಣುತ್ತಿಲ್ಲ. ಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ ಎಲ್ಲವನ್ನು ಕಾದು ನೋಡಿ, ಮುಂದೆ ನಿಮಗೆ ಗೊತ್ತಾಗುತ್ತದೆ ಎಂದರು.

ಬಿಜೆಪಿ ಕಾರ್ಯಕರ್ತರು ಧೃತಿಗೆಟ್ಟಿದ್ದಾರೆ, ಭರವಸೆ ಕಳೆದುಕೊಂಡಿದ್ದಾರೆ ನಾಯಕನಿಲ್ಲದ ಪಕ್ಷ ಅನ್ನೋ ಕೊರಗು ಅವರನ್ನು ಕಾಡುತ್ತಿದೆ. ಆಪರೇಷನ್ ಕಮಲ ಪ್ರಕ್ರಿಯೆ ನಡೆದೆ ಇದೆ ಈ ರೀತಿ ಮಾಡಿದ್ರೆ ಕೈ ಶಾಸಕರು ತಮ್ಮ ಪಕ್ಷಕ್ಕೆ ಬರ್ತಾರೆ ಅನ್ನುವ ಭ್ರಮೆಯಲ್ಲಿದ್ದಾರೆ ಆಪರೇಷನ್ ಕಮಲ ಪ್ರಯತ್ನ ಸಫಲವಾಗಲ್ಲ ಎಂದರು.

administrator

Related Articles

Leave a Reply

Your email address will not be published. Required fields are marked *