ಹುಬ್ಬಳ್ಳಿ-ಧಾರವಾಡ ಸುದ್ದಿ

ಶೀಘ್ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಹುಬ್ಬಳ್ಳಿ: ಶೀಘ್ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದರು.
ಗದಗಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೆ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ” ಎಂದು ತಿಳಿಸಿದರು.


ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಕೇಳಿದಾಗ, “ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ. ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ” ಎಂದು ತಿಳಿಸಿದರು.


ಬಿಜೆಪಿ ಬರ ಅಧ್ಯಯನ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ” ಎಂದು ತಿಳಿಸಿದರು.


ನಿಗಮ, ಮಂಡಳಿ ನೇಮಕ ಯಾವಾಗ ಎಂದಾಗ, ನೀವು ಹೇಳಿದಾಗ ಎಂದು ಜಾರಿಕೊಂಡರು.ಶಿವಕುಮಾರ್ ಅವರನ್ನು ಸ್ವಾಗತಿಸಲು ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಬಂದಿದ್ದರು.

 

administrator

Related Articles

Leave a Reply

Your email address will not be published. Required fields are marked *