ಹುಬ್ಬಳ್ಳಿ-ಧಾರವಾಡ ಸುದ್ದಿ

ಬಿಜೆಪಿ ಕಚೇರಿ ಎದುರು ಈಶ್ವರಪ್ಪ, ಯತ್ನಾಳ ಪ್ರತಿಕೃತಿ ದಹನ

ಹುಬ್ಬಳ್ಳಿ: ಈಚೆಗೆ ಕೆಂಪುಕೋಟೆಯ ಮೇಲೆ ಕೇಸರಿ ಭಾವುಟ ಹಾರಿಸುತ್ತೇವೆ ಎಂದು ಅಸಂವಿಧಾನಿಕ ಹೇಳಿಕೆ ನೀಡಿದ್ದಲ್ಲದೆ ಸದನದಲ್ಲಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯನವರ ಬಗ್ಗೆ ಏಕವಚನದಲ್ಲಿ ಮಾತನಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಪಾಕಿಸ್ತಾನ ಏಜೆಂಟ ಎಂದಿರುವ ವಿಜಯಪುರ ಶಾಸಕ ಬಸನಗೌಡ ಯತ್ನಾಳರ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಕಚೇರಿ ಎದುರು ಸಚಿವ ಈಶ್ವರಪ್ಪ ಹಾಗೂ ಶಾಸಕ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯರಾದ ಆರೀಫ್ ಭದ್ರಾಪೂರ, ಸೆಂದಿಲ್ ಕುಮಾರ, ಇಕ್ಬಾಲ್ ನವಲೂರ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆಕಾಶ ಕೋನೇರಿ, ವಿದ್ಯಾನಗರ ಬ್ಲಾಕ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ, ಶಾಜಮಾನ್ ಮುಜಾಹೀದ್, ಶಿವಾ ಬೆಂಡಿಗೇರಿ, ಲಕ್ಷ್ಮಣ ಗಡ್ಡಿ, ಸುನಿಲ್ ಮರಾಠೆ, ಅರುಣ ಹಳ್ಳಿಕೇರಿ, ಸಾದಿಕ್ ಎಕ್ಕುಂಡಿ, ಸಂತೋಷ ನಾಯಕ ಸೇರಿದಂತೆ ಯುವ ಹಾಗೂ ಎನ್‌ಎಸ್‌ಯುಐ ಮತ್ತು ಕಾಂಗ್ರೆಸಿನ ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಇದ್ದರು.

ಈಶ್ವರಪ್ಪ ವಜಾಕ್ಕೆ ಯುವ ಕಾಂಗ್ರೆಸ್ ಪಟ್ಟು

ಧಾರವಾಡ : ಸಚಿವ ಕೆಎಸ್ ಈಶ್ವರಪ್ಪನವರು ಇತ್ತೀಚಿಗೆ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ ಎಂಬ ಅಸಂವಿಧಾನಿಕ ಹೇಳಿಕೆ ವಿರುದ್ಧ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾದ ನಗರದಲ್ಲಿ ಪ್ರತಿಭಟನೆ ನಡೆಸಿದರು.


ಇತ್ತೀಚಿಗೆ ಸಂಪುಟ ದರ್ಜೆ ಸಚಿವರಾದ ಕೆಎಸ್ ಈಶ್ವರಪ್ಪನವರು ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಾಡುವ ಜಾಗದಲ್ಲಿ ಕೇಸರಿ ಧ್ವಜವನ್ನು ಹಾರೈಸುತ್ತೇವೆ ಎಂಬ ಅಸಂವಿಧಾನಿಕ ಹೇಳಿಕೆ ವಿರುದ್ಧ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸುಭಾಸ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಶೀಘ್ರವೇ ಕೆಎಸ್ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು.ಹಾಗೂ ಅಲ್ಲದೇ ಈಶ್ವರಪ್ಪನವರು ಜನತೆಯ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.


ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಂಬೈ-ಕರ್ನಾಟಕ ಉಸ್ತುವಾರಿ ನಾಗಾರ್ಜುನ ಕತ್ರಿಮಲ್ , ಕಾರ್ಯದರ್ಶಿ ಬಾಬು ಗೌಳಿ, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುನಿಲ್ ಶಿಂಧೆ. ಸಂತೋಷ್ ನಾಯಕ್ ಕಾಶಿಂ ಕೂಡ್ಲಿಗಿ, ಎನ್.ಎಸ್ ಯು.ಐ ಕಾರ್ಯದರ್ಶಿ ಫೈರೋಜ್ ಪಠಾಣ. ಸಮರ್ಥ ದೇಸಾಯಿ, ನಾಗರಾಜ್ ತಳ್ಳಿಹಾಳ ಇನ್ನಿತರರು ಪ್ರತಿಭಟನೆಯಲ್ಲಿದ್ದರು.

 

administrator

Related Articles

Leave a Reply

Your email address will not be published. Required fields are marked *