ಹುಬ್ಬಳ್ಳಿ: ದಿ. 10ರಂದು ನಡೆವ ಪರಿಷತ್ ಚುನಾವಣೆ ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಆಗುವಂತೆ ಮತ ಚಲಾಯಿಸಿ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಹೇಳಿದರು.
ಧಾರವಾಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಯಲ್ಲಿ ನಗರದ ಖಾಸಗಿ ಹೊಟೆಲ್ ನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾಯಿತ ಕಾಂಗ್ರೆಸ್ ಪಕ್ಷದ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರನ್ನು ಗದಗ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಳನ್ನು ಕೊಡಿಸುವ ಮೂಲಕ ಗೆಲ್ಲಿಸಲಾಗಿತ್ತು ಪಕ್ಷದ ಎಲ್ಲ ಸದಸ್ಯರು ತಪ್ಪದೇ ಮತದಾನ ಮಾಡಿ ಪ್ರಥಮ ಪ್ರಾಶ್ಯಸ್ತದಲ್ಲೇ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಪಾಲಿಕೆಯ ಕಾಂಗ್ರೆಸ್ ಪಕ್ಷದ ಬೆಂಬಲಿತರಿಗೆ ವಿಪ್ ಜಾರಿ ಮಾಡಲಾಯಿತಲ್ಲದೇ ಜೆಡಿಎಸ್ ಪಕ್ಷದಿಂದ ಗೆದ್ದು ಬಂದ ಲಕ್ಷ್ಮಿ ಹಿಂಡಸಗೇರಿ ಅವರ ಪತಿ ಮಾರುತಿ ಹಿಂಡಸಗೇರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು.
ಈ ಸಂದರ್ಭದಲ್ಲಿ ಹು-ಧಾ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಮುಖಂಡರಾದ ಇಸ್ಮಾಯಿಲ್ ತಮಟಗಾರ, ನಾಗರಾಜ್ ಛಬ್ಬಿ, ದೀಪಕ್ ಚುಂಚುರೆ, ಸದಾನಂದ ಡಂಗನವರ, ದೀಪಾ ಗೌರಿ ಸೇರಿದಂತೆ ಪಾಲಿಕೆ ಸದಸ್ಯರು, ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.