ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಜೀವನಗೌಡ್ರ ನೇಮಕ

ಹುಬ್ಬಳ್ಳಿ : ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ನಿರ್ವಹಿಸಿದ ಸಂತೋಷ ಜೀವನಗೌಡ್ರಗೆ ಇದೀಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಟ್ಟ ಒಲಿದು ಬಂದಿದೆ.
ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಜೀವನಗೌಡ್ರ ಅವರು ನೇಮಕಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ ಅವರು ಜೀವನಗೌಡ್ರ ನೇಮಕವನ್ನು ಪ್ರಕಟಿಸಿದ್ದಾರೆ.

ಇದೀಗ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಜೀವನಗೌಡ್ರ ಅವರು ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ಸಂತೋಷ ಬ್ಯಾಹಟ್ಟಿ ಗ್ರಾಮ ಪಂಚಾಯಿತಿಗೆ ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿ ಗ್ರಾಮದ ಸಮಗ್ರ ಅಭಿವೃದ್ಧಿ ಕೆಲಸಗಳನ್ನು ಮಾಡಿ ಗ್ರಾಮಸ್ಥರಿಂದ ಸೈ ಎನಿಸಿಕೊಂಡಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ತಮ್ಮ ಸಂಭ್ರಮ ಹಂಚಿಕೊಂಡಿರುವ ಸಂತೋಷ ಜೀವನಗೌಡ್ರ ಅವರು, ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಕಾರ್ಯಗಳನ್ನು, ಸಂಘಟನೆಯನ್ನು ಮಾಡಿಕೊಂಡು ಬಂದಿರುವೆ ನನ್ನ ಕಾರ್ಯಕ್ಕೆ ಮೆಚ್ಚಿ, ನನ್ನ ಮೇಲೆ ನಂಬಿಕೆ ಇಟ್ಟು ಪಕ್ಷದ ಹಿರಿಯರು ನನಗೆ ಗುರುತರ ಜವಾಬ್ದಾರಿಯನ್ನು ವಹಿಸಿದ್ದಾರೆ. ಇನ್ನು ಮುಂದೆಯೂ ಪ್ರಾಮಾಣಿಕವಾಗಿ, ಜನಸೇವೆಯ ಪರಿಕಲ್ಪನೆಯೊಂದಿಗೆ ನನಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ಸಮಾಜ ಸೇವೆ ಮಾಡುತ್ತೇನೆ. ಪಕ್ಷದ ಸಂಘಟನೆ ಮಾಡುತ್ತೇನೆ, ಈ ಹುದ್ದೆ ನನಗೆ ಸಿಗುವಲ್ಲಿ ಪ್ರೋತ್ಸಾಹಿಸಿದ ಹಾಗೂ ಇದಕ್ಕೆ ಕಾರಣರಾದ ಎಲ್ಲ ಹಿರಿಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.


