ಧಾರವಾಡ: ಬೆಂಗಳೂರಿನ ಗುತ್ತಿಗೆದಾರನ ಮನೆಯ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಪಂಚರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಕಡೆಯಿಂದ ಈ ಹಣ ಹೋಗುತ್ತಿತ್ತು ಎಂದು ಆರೋಪಿಸಿದರು.
ಈ ಮಧ್ಯೆ ಪೊಲೀಸ್ ಅಧಿಕಾರಿಗಳ ಮುಂದೆಯೇ ಎಟಿಎಂ ಮುಖ್ಯಮಂತ್ರಿ ಮತ್ತು ಎಟಿಎಂ ಉಪ ಮುಖ್ಯಮಂತ್ರಿ ಎಂದು ಬರೆದಿರುವ ಫಲಕಗಳನ್ನು ಪೊಲೀಸ್ ಬ್ಯಾರಿಕೇಡ ಮೇಲೆ ಅಂಟಿಸಲಾಯಿತು.
ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಆಗಿದೆ, ಹಾಗೂ ಕಲೆಕ್ಷನ್ ಕೇಂದ್ರವಾಗಿದೆ, ರಾಜ್ಯದಲ್ಲಿ ಮಳೆ ಇಲ್ಲದೆ ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ, ವಿದ್ಯುತ್ ಕಡಿತ ವಿಪರೀತವಾಗಿದೆ, ವರ್ಗಾವಣೆ ದಂಧೆ ನಡೆಯುತ್ತಿದೆ, ತುಷ್ಟಿಕರಣದಲ್ಲಿ ಸರ್ಕಾರ ಮುಳುಗಿದೆ, ರಾಜ್ಯದಲ್ಲಿ ಗಲಭೆಗಳು ಆಗುತ್ತಿವೆ. ಎಂದು ಮಾತನಾಡಿದ ಮುಖಂಡರು ಹೇಳಿದರಲ್ಲದೇ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದರು.
ಧಾರವಾಡದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿಯವರ ಉಪಸ್ಥಿತಿಯಲ್ಲಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಈ ಮೂಲಕ ಮನವಿ ಮಾಡಿದರು.
ಮಾಜಿ ಶಾಸಕಿ ಸೀಮಾ ಮಸೂತಿ,ರಾಜಣ್ಣ ಕೊರವಿ, ವಿಜಯಾನಂದ ಶೆಟ್ಟಿ,ದತ್ತಮೂರ್ತಿ ಕುಲಕರ್ಣಿ, ರವಿ ನಾಯಕ, ಮೋಹನ ರಾಮದುರ್ಗ, ಬಸವರಾಜ ಗರಗ, ಸುನೀಲ ಮೊರೆ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ ಸೇರಿದಂತೆ ಪಾಲಿಕೆ ಸದಸ್ಯರು, ಕಾರ್ಯಕರ್ತರು ಇದ್ದರು.