ಹುಬ್ಬಳ್ಳಿ-ಧಾರವಾಡ ಸುದ್ದಿ
ಶಿವಲೀಲಾ ವಿನಯ ಕುಲಕರ್ಣಿ ನಾಮನಿರ್ದೇಶನ ರದ್ದು ಕೋರಿ ಶಂಕರ ಮುಗದ ಕೋರ್ಟ್‌ಗೆ ಮೊರೆ

ಶಿವಲೀಲಾ ವಿನಯ ಕುಲಕರ್ಣಿ ನಾಮನಿರ್ದೇಶನ ರದ್ದು ಕೋರಿ ಶಂಕರ ಮುಗದ ಕೋರ್ಟ್‌ಗೆ ಮೊರೆ

ನಾಳೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಬಿಜೆಪಿ ಅಧಿಕಾರ ಕಸಿದುಕೊಳ್ಳಲು ಕಾಂಗ್ರೆಸ್ ತೆರೆಮರೆ ಕಸರತ್ತು!

ತಮ್ಮ ಪತ್ನಿ ಆಕಾಂಕ್ಷಿಯೂ ಅಲ್ಲ. ಸ್ಪರ್ಧಿಸುವ ಬಯಕೆಯೂ ಇಲ್ಲ: ವಿನಯ ಕುಲಕರ್ಣಿ

ಧಾರವಾಡ: ಇತ್ತೀಚೆಗೆ ಸರಕಾರದಿಂದ ಕೆಎಂಎಫ್ ಗೆ ನಾಮನಿರ್ದೆಶನಗೊಂಡಿದ್ದ ಶಾಸಕ ವಿನಯ ಕುಲಕರ್ಣಿ ಅವರ ಶಿವಲೀಲಾ ಅವರಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ.
ಇತ್ತೀಚೆಗೆ ಸರಕಾರದಿಂದ ಕೆಎಂಎಫ್ ಗೆ ನಾಮನಿರ್ದೆಶನಗೊಂಡಿದ್ದ ಶಾಸಕ ವಿನಯ ಕುಲಕರ್ಣಿ ಅವರ ಶಿವಲೀಲಾ ಅವರಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ.


ಶಿವಲೀಲಾ ಕುಲಕರ್ಣಿ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ನಿರ್ದೇಶಕ ಶಂಕರ ಮುಗದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಿವಲೀಲಾ ಕುಲಕರ್ಣಿ ಅವರು ಸ್ವತಃ ಡೇರಿ ಹೊಂದಿದ್ದು, ದೊಡ್ಡ ಪ್ರಮಾಣದ ಹೈನುಗಾರಿಕೆ ನಡೆಸುತ್ತಿದ್ದಾರೆ. ಕೆಎಂಎಫ್ ಗೆ ನಾಮನಿರ್ದೇಶನ ಆಗುವುದರ ಹಿಂದೆ ಸ್ವಹಿತಾಸಕ್ತಿ ಅಡಗಿದೆ. ಹೀಗಾಗಿ ನಾಮನಿರ್ದೇಶನದಲ್ಲಿ ಕೆಎಂಎಫ್ ನಿಯಮಾವಳಿಯ ಉಲ್ಲಂಘನೆ ಆಗಲಿದೆ. ಆದ್ದರಿಂದ ಅವರ ನಾಮನಿರ್ದೇಶನ ಸರಿಯಲ್ಲ ಎಂದು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.


ನಾಳೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಜರುಗಲಿರುವುದರಿಂದ ಇಂದೇ ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಕಾರಣದಿಂದ ಕೆಎಂಎಫ್ ಅಧ್ಯಕ್ಷ ಗಾದಿಗಾಗಿ ನಡೆಯುತ್ತಿರುವ ಚುನಾವಣೆ ಮತ್ತಷ್ಟು ಕೌತುಕ ಮೂಡಿಸಿದೆ. ಹಾಲಿ ಅಧ್ಯಕ್ಷ ಶಂಕರ ಮುಗದ ಐದನೇ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿ, ಮತ್ತೆ ಅಧ್ಯಕ್ಷರಾಗುವ ಉಮೇದಿಯಲ್ಲಿದ್ದಾರೆ. ಇದೇ ಸಮಯದಲ್ಲಿ ಮಾಜಿ ಶಾಸಕ ಅಮೃತ ದೇಸಾಯಿ ಅವರ ಆಪ್ತ ಶಂಕರ ಮುಗದ ಅವರಿಗೆ ಅಧ್ಯಕ್ಷ ಗಾದಿ ಸಿಗದಂತೆ ಸರ್ವ ಪ್ರಯತ್ನವನ್ನು ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದವರು ನಡೆಸುತ್ತಿದ್ದಾರೆ.

ನಾಳೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಧಾರವಾಡ: ಇಲ್ಲಿನ ಧಾರವಾಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತುಹಲ ಮೂಡಿಸಿದೆ.
ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಕೆಎಂಎಫ್ ನಿರ್ದೇಶಕರ ಸ್ಥಾನಕ್ಕೆ ಕಳೆದ ಜೂ.30 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಮೇಲುಗೈ ಸಾಧಿಸಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆರುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಆದರೂ ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್ ತೆರೆಮರೆಯಲ್ಲಿ ಕಸರತ್ತು ನಡೆಸಿದರೂ ಆಶ್ಚರ್ಯವಿಲ್ಲ. ಈ ದಿಸೆಯಲ್ಲಿ ಮಾಜಿ ಅಧ್ಯಕ್ಷ ನೀಲಕಂಠ ಅಸೂಟಿ ಪ್ರಯತ್ನಿಸಬಹುದು.


9 ಸ್ಥಾನದ ಪೈಕಿ ಸುಮಾರು ಏಳು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿದ್ದರೆ, ಇಬ್ಬರು ಕಾಂಗ್ರೆಸ್ ಬೆಂಬಲಿತರಿದ್ದಾರೆ (ನೀಲಕಂಠ ಅಸೂಟಿ, ಹನಮಂತಗೌಡ ಹಿರೇಗೌಡರ). ಆದರೆ, ಕಳೆದ ಎರಡು ದಿನಗಳ ಹಿಂದೆ ಮಾಜಿ ಸಚಿವ, ಪ್ರಭಾವಿ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಸರಕಾರದಿಂದ ನಾಮನಿರ್ದೇಶನಗೊಳಿಸಿದ್ದು ಮತ್ತಷ್ಟು ಕುತೂಹಲ ಕೆರಳಿಸಿದೆ.
ಬಲಾಬಲ ಎಷ್ಟು…. 9 ಚುನಾಯಿತ ನಿರ್ದೇಶಕರು, ಓರ್ವ ನಾಮನಿದೇಶಿತ ಸದಸ್ಯರಿದ್ದಾರೆ. ಶಿವಲೀಲಾ ಕುಲಕರ್ಣಿ ಅವರು ಸೇರಿ ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರಿದ್ದಾರೆ.


ಅಧ್ಯಕ್ಷ ಸ್ಥಾನಕ್ಕೆ 9 ಚುನಾಯಿತ ಹಾಗೂ ಓರ್ವ ನಾಮನಿದೇಶಿತ ಸದಸ್ಯರು ಮಾತ್ರವಲ್ಲದೇ ನಾಲ್ವರು ಅಧಿಕಾರಿಗಳು (ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು, ಕೆಎಂಎಫ್ ಅಧಿಕಾರಿ, ಎನ್‌ಡಿಡಿಬಿ ಅಧಿಕಾರಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ) ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಮತ ಚಲಾವಣೆಯ ಅಧಿಕಾರ ಹೊಂದಿದ್ದಾರೆ.
ಬಿಜೆಪಿಗೆ ಚುನಾಯಿತ 7 ಸದಸ್ಯರು ಮತ್ತು ಎನ್‌ಡಿಡಿಬಿ ಅಧಿಕಾರಿ ಸೇರಿ ಒಟ್ಟು 8 ಸದಸ್ಯರ ಸಂಖ್ಯಾಬಲ ಪಡೆಯಲಿದೆ. ಆದರೆ, ಕಾಂಗ್ರೆಸ್‌ಗೆ ಮೂವರು ಸದಸ್ಯರು ಮತ್ತು ಮೂವರು ಅಧಿಕಾರಿಗಳು (ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು, ಕೆಎಂಎಫ್ ಅಧಿಕಾರಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ) ಸೇರಿ 6 ಸದಸ್ಯರ ಬಲ ಸಿಗಲಿದೆ.


ಇನ್ನೂ ಬಿಜೆಪಿ ಮೇಲುಗೈ ಸಾಧಿಸುವ ಉಮೇದಿನಲ್ಲಿದೆ. ಹೀಗಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯೇ ಗದ್ದುಗೆಗೇರುವುದು ಖಾತ್ರಿ. ಇದನ್ನೂ ಹೊರತುಪಡಿಸಿ ಕಾಂಗ್ರೆಸ್ ತಂತ್ರ ರೂಪಿಸಿ ಅಧಿಕಾರಕ್ಕೇರಲು ಹರಸಾಹಸ ಪಡಬೇಕಿದೆ.ಆದರೆ, ಇದು ಅಷ್ಟು ಸುಲಭವಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಈ ಕಾರಣದಿಂದ ಒಂದೇ ನಾಮಪತ್ರ ಸಲ್ಲಿಕೆ ಯಾಗುವ ಸಾಧ್ಯತೆ ಇದೆ. ಬಿಜೆಪಿ ಬೆಂಬಲಿತ, ಐದನೇ ಬಾರಿಗೆ ಆಯ್ಕೆಯಾಗಿರುವ ಶಂಕರ ಮುಗದ ಮತ್ತೇ ನಾಮಪತ್ರ ಸಲ್ಲಿಸುವುದು ನಿಶ್ಚಿತ. ಒಂದೇ ನಾಮಪತ್ರ ಸಲ್ಲಿಕೆಯಾದರೆ ಅವಿರೋಧ ಆಯ್ಕೆಯಾಗಲಿದೆ. ಒಂದು ವೇಳೆ ಕಾಂಗ್ರೆಸ್ ನಾಮಪತ್ರ ಸಲ್ಲಿಸಬೇಕೆಂದರೆ ಪೂರ್ವ ಸಿದ್ಧತೆ ಕೂಡ ಅಗತ್ಯವಿದೆ. ನಾಳೆ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸಮಯವಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಡಾ.ವೀರೇಶ ತರ್ಲಿ ತಿಳಿಸಿದ್ದಾರೆ.

ಸ್ಪರ್ಧಿಸಲ್ಲ


ತಮ್ಮ ಪತ್ನಿಯನ್ನು ಸರಕಾರ ನಾಮನಿರ್ದೇಶನ ಮಾಡಿದೆ. ಆದರೆ, ಅವರು ಅಧ್ಯಕ್ಷ ಸ್ಥಾನ ಆಕಾಂಕ್ಷಿಯೂ ಅಲ್ಲ. ಸ್ಪರ್ಧಿಸುವ ಬಯಕೆಯೂ ಇಲ್ಲ.
ವಿನಯ ಕುಲಕರ್ಣಿ, ಶಾಸಕರು.

 

 

administrator

Related Articles

Leave a Reply

Your email address will not be published. Required fields are marked *