ಹುಬ್ಬಳ್ಳಿ: ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯಲ್ಲಿ ಶಾಲೆಯಲ್ಲಿ ಏಳು ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲೆಯನ್ನು ಸೀಲ್ ಡೌನ್ ಮಾಡಿದೆ.
ಮೊದಲು ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ತದನಂತರ ಐವರಿಗೆ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಮೂರು ದಿನಗಳ ಹಿಂದೆಯೇ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ ಶಾಲೆಯ ಉಳಿದ ವಿದ್ಯಾರ್ಥಿಗಳ ಕೋವಿಡ್ ಟೆಸ್ಟ ಸಹ ಮಾಡಿಸಲಾಗಿದೆ.
ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಶಾಲೆ ಕಾಲೇಜುಗಳು ಬಂದ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯನ್ನು ಆರಂಭಿಸಲು ಅನುಮತಿ ನೀಡಲಾಗುವುದು ಎಂದು ಡಿಡಿಪಿಐ ಎಸ್ .ಎಸ್.ಕೆಳದಿಮಠ ತಿಳಿಸಿದ್ದಾರೆ.