ಹುಬ್ಬಳ್ಳಿ-ಧಾರವಾಡ ಸುದ್ದಿ

ತಂದೆಯಿಂದಲೇ ಮಗನ ಹತ್ಯೆಗೆ ಸುಪಾರಿ!

ದೇವರಗುಡಿಹಾಳ ತೋಟದ ಮನೆಯಲ್ಲಿ ಮೃತ ದೇಹ ಪತ್ತೆ

ನಾಪತ್ತೆ ಪ್ರಕರಣ 48ಗಂಟೆಗಳಲ್ಲಿ ಭೇದಿಸಿದ ಹಂಚಿನಾಳ ತಂಡ

ಹುಬ್ಬಳ್ಳಿ: ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯ ಮಹಾವೀರ ಜ್ಯುವೆಲರ್ಸ ಮಾಲಿಕರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಅವರ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ.
’ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣದ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ.


ಉದ್ಯಮಿ ಭರತ್ ಜೈನ್‌ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ ದೂರು ನೀಡಿದ್ದರು.

ಮಗ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಭರತ ಜೈನ್ ರಂಪಾಟ ಮಾಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ತಂದೆ ಮೇಲೆಯೇ ಸಣ್ಣ ಸಂಶಯ ಮೂಡಿತ್ತು. ತಂದೆ ಭರತ್ ಜೈನ್‌ರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ ಮಗನ ಹತ್ಯೆಗೆ ಸ್ಥಳೀಯ ಹಂತಕರಿಗೆ ಸುಪಾರಿ ನೀಡಿದ್ದಾಗಿ ತಂದೆ ಬಾಯ್ಬಿಟ್ಟಿದ್ದಾರೆ. ಇವರ ಹೇಳಿಕೆ ಆಧರಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ  ಗ್ರಾಮದಲ್ಲಿ ಭರತ್ ಜೈನ್‌ಗೆ ಸೇರಿದ ತೋಟದ ಮನೆಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.


ಮಗನ ಹತ್ಯೆಗೆ ಸುಪಾರಿ ಕೊಟ್ಟಿದ್ದು ಏಕೆ ಎಂಬ ಕಾರಣ ಇನ್ನೂ ಗೊತ್ತಾಗಿಲ್ಲ. ಪ್ರಕರಣ ದಾಖಲಾದ 48 ಗಂಟೆಯೊಳಗೆ ಕೇಶ್ವಾಪುರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದೆ.

administrator

Related Articles

Leave a Reply

Your email address will not be published. Required fields are marked *