ಹುಬ್ಬಳ್ಳಿ-ಧಾರವಾಡ ಸುದ್ದಿ

ವಿನಯ ಮನೆಗೆ ’ಐಟಿ’ಬೆಂಬಲಿಗರ ಮುತ್ತಿಗೆ ಯತ್ನ

144 ಹಿನ್ನೆಲೆ : ಪ್ರತಿಭಟನಾಕಾರರಿಗೆ ಪೊಲೀಸರಿಂದ ಎಚ್ಚರಿಕೆ

ತಮಟಗಾರ ಕಡೆಗಣನೆ ಸರಿಯಲ್ಲ: ಧಾರವಾಡದಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆ ಎಚ್ಚರಿಕೆ 

ಧಾರವಾಡ: ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಧಾರವಾಡ ಶಾಸಕ ವಿನಯ ಕುಲಕರ್ಣಿ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದ ಇಸ್ಮಾಯಿಲ್ ತಮಟಗಾರ ಬೆಂಬಲಿಗರನ್ನು ಪೊಲೀಸರು ಖಡಕ್ ಎಚ್ಚರಿಕೆ ನೀಡಿ ಚದುರಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ 144 ಸೆಕ್ಷನ್ ಜಾರಿ ಇದ್ದು, ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸರು ಖಡಕ್ ಎಚ್ಚರಿಕೆಯನ್ನು ಪ್ರತಿಭಟನಾಕಾರರಿಗೆ ನೀಡಿದರು. ಪ್ರತಿಭಟನಾಕಾರರು ಪೊಲೀಸರ ಜೊತೆಗೆ ಕೆಲ ಹೊತ್ತು ನಮ್ಮ ನಾಯಕರ ಬಳಿ ನ್ಯಾಯ ಕೇಳಲು ಬಂದಿದ್ದೇವೆ. ನಮ್ಮ ಹಕ್ಕು ಕೇಳುತ್ತಿದ್ದೇವೆ ಎಂದು ವಾಗ್ವಾದಕ್ಕೆ ಇಳಿದಿದ್ದಾರೆ.


ಪ್ರತಿಭಟನೆ ಹಾಗೂ ಮುತ್ತಿಗೆ ಹಾಕಲು ಅವಕಾಶ ಇಲ್ಲ, ಜೂನ್ 5 ರ ವರೆಗೆ ಸಾಧ್ಯವಿಲ್ಲ, ನೀವು ಪೋನ್ ಮೂಲಕ ಮಾತನಾಡಿ ಎಂದು ಇಸ್ಮಾಯಿಲ್ ತಮಟಗಾರ ಬೆಂಬಲಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.
ನಂತರ ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖಂಡರು ಹಾಗೂ ಕೆಲ ಕಾಂಗ್ರೆಸ್ ಮುಖಂಡರು ಮಧ್ಯೆ ಪ್ರವೇಶಿಸಿ ಪ್ರತಿಭಟನೆ ಕೈಬಿಟ್ಟು ಮನೆಗಳಿಗೆ ತೆರಳಿದರು.


ಅಂಜುಮನ್ ಪ್ರಮುಖರ ಆಕ್ರೋಶ : ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರರಿಗೆ ವಿಧಾನ ಪರಿಷತ್ ಟಿಕೇಟ್ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸ್ಥೆ ಪದಾಧಿಕಾರಿಗಳು ಹಾಗೂ ಮುಸ್ಲಿಂ ಸಮಾಜದ ಮುಖಂಡರು ನಿನ್ನೆ ರಾತ್ರಿ ನಗರದ ವಿವೇಕಾನಂದ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಜಿಲ್ಲೆಯ ಅಂಜುಮನ್ ಸಂಸ್ಥೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಧಾರವಾಡ ಅಂಜುಮನ್ ಸಂಸ್ಥೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಪ್ರಭಾವಿ ನಾಯಕ ಇಸ್ಮಾಯಿಲ್ ತಮಾಟಗಾರ ವಿಧಾನ ಪರಿಷತ್‌ಗೆ ಆಯ್ಕೆಯಾದರೆ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮುಸ್ಲಿಮ್ ನಾಯಕತ್ವ ಬೆಳೆಯುತ್ತದೆ. ಅದನ್ನು ಈಗಲೇ ನಿಯಂತ್ರಿಸುವ ಉದ್ದೇಶದಿಂದ ತಮಟಗಾರರಿಗೆ ಟಿಕೇಟ್ ತಪ್ಪಿಸಲಾಗಿದೆ. ಅಲ್ಲದೇ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.


ಧಾರವಾಡ ಜಿಲ್ಲೆಯ ಶಾಸಕರಾದ ವಿನಯ ಕುಲಕರ್ಣಿ, ಎನ್. ಎಚ್. ಕೋನರಡ್ಡಿ. ಪ್ರಸಾದ ಅಬ್ಬಯ್ಯ, ಸಂತೋಷ ಲಾಡ್ ಕೂಡಲೇ ಪಕ್ಷದ ಹೈಕಮಾಂಡ್ ಮೇಲೆ ಒತ್ತಾಯ ತಂದು ಇಸ್ಮಾಯಿಲ್ ತಮಟಗಾರರಿಗೆ ವಿಧಾನ ಪರಿಷತ್ ಟಿಕೇಟ್ ನೀಡಬೇಕೆಂದು ಮುಖಂಡರು ಆಗ್ರಹಿಸಿದರು.
ಅಂಜುಮನ್ ಉಪಾಧ್ಯಕ್ಷ ಬಶೀರ್ ಜಾಗೀರದಾರ, ಖಾದಿರ್ ಸರ್ಗಿರೋ, ಕಾರ್ಯದರ್ಶಿ ಶಫಿ ಕಳ್ಳಿಮನಿ, ಜಂಟಿ ಕಾರ್ಯದರ್ಶಿ ರಫೀಕ್ ಶಿರಹಟ್ಟಿ, ಖಜಾಂಚಿ ಎಂ.ಎ.ಪಠಾಣ್, ಮುಖಂಡರಾದ ರಫೀಕ್ ಬಿಸ್ತಿ, ಇರ್ಷಾದ್ ಬಿಸ್ತಿ, ಸಲೀಮ್ ಸಂಗನಮುಲ್ಲಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

ತಮಟಗಾರ ಕಡೆಗಣನೆ ಸರಿಯಲ್ಲ: ಧಾರವಾಡದಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆ ಎಚ್ಚರಿಕೆ 

ಧಾರವಾಡ: ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಇಸ್ಮಾಯಿಲ್ ತಮಟಗಾರ ಬೆಂಬಲಿಗರು ಪ್ರತಿಭಟನೆ ನಡೆಸಿ, ನಗರದ ಕಲಾ ಭವನದ ಎದುರು ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.


ಸಾಮಾಜಿಕ ನ್ಯಾಯ ತಳಹದಿಯಲ್ಲಿ ಮುಸ್ಲಿಂ ಸಮುದಾಯದ ಮುಂಚೂಣಿ ಯಲ್ಲಿರುವ ನಾಯಕ ಇಸ್ಮಾಯಿಲ್ ತಮಟಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊಡಬೇಕು ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯದ ಬೆಂಬಲ ನೀಡುತ್ತಲೇ ಬಂದಿದೆ. ಆದರೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಉತ್ತರ ಕರ್ನಾಟಕ ಭಾಗದ ಮುಸ್ಲಿಂ ಮುಖಂಡ ಇಸ್ಮಾಯಿಲ್ ತಮಟಗಾರ ಕಡೆಗಣನೆ ಮಾಡುವುದು ಸರಿಯಲ್ಲ ಎಂದು ಇಸ್ಮಾಯಿಲ್ ತಮಟಗಾರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

 

administrator

Related Articles

Leave a Reply

Your email address will not be published. Required fields are marked *