ಹುಬ್ಬಳ್ಳಿ-ಧಾರವಾಡ ಸುದ್ದಿ
ಸುಪ್ರೀಂನಲ್ಲಿ ವಿನಯ ಅರ್ಜಿ ವಜಾ  ಸಿಬಿಐ ತನಿಖೆ ಪ್ರಶ್ನಿಸಿದ್ದ ಮೇಲ್ಮನವಿ ತಿರಸ್ಕೃತ

ಸುಪ್ರೀಂನಲ್ಲಿ ವಿನಯ ಅರ್ಜಿ ವಜಾ ಸಿಬಿಐ ತನಿಖೆ ಪ್ರಶ್ನಿಸಿದ್ದ ಮೇಲ್ಮನವಿ ತಿರಸ್ಕೃತ

ಹೊಸದಿಲ್ಲಿ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮೇಲೆ ಹೊದರಬಂದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ರಾಜ್ಯ ಸರ್ಕಾರದ ಬಿಜೆಪಿ ಸದಸ್ಯನ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಪ್ರಶ್ನಿಸಿ, ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.


ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಬಂದಾಗ ವಜಾಗೊಂಡಿದ್ದು ಇದರಿಂದ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಲ್ಲಿಯೂ ಹಿನ್ನಡೆ ಉಂಟಾಗಿದೆ.
2019 ರಲ್ಲಿ ರಾಜ್ಯ ಸರ್ಕಾರ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಪ್ರಶ್ನಿಸಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ವಜಾಗೊಳಿಸಿದ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈಗ ಸುಪ್ರೀಂ ಕೋರ್ಟ್ ಕೂಡ ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಮತ್ತೆ ಮಾಜಿ ಸಚಿವ ಕುಲಕರ್ಣಿ ಗೆ ಸಂಕಷ್ಟ ಎದುರಾದಂತಾಗಿದೆ.

 

administrator

Related Articles

Leave a Reply

Your email address will not be published. Required fields are marked *