ಬೆಂಗಳೂರು: ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಅರ್ಜಿಯನ್ನು ವಜಾಗೊಳಿಸಿ, ಸಿಬಿಐ ತನಿಖೆ ಎದುರಿಸುವಂತೆ ಸೂಚಿಸಿ ಬೆಂಗಳೂರು ಹೈಕೋರ್ಟ್ ವಿಶೇಷ ಪೀಠ ಇದೀಗ ಮಹತ್ವದ ಆದೇಶ ಹೊರಡಿಸಿದೆ.
ಧಾರವಾಡ ಜಿಲ್ಲಾ ಪಂಚಾಯತ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸುಪ್ರೀಂ ಕೋರ್ಟ್ ಎದುರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಎರಡು ತಿಂಗಳ ಒಳಗೆ ಇರ್ತಥ್ಯಗೊಳಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ, ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರ ಹೈಕೋರ್ಟ್‌ನ ವಿಶೇಷ ಪೀಠ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿದೆ.ಅಲ್ಲದೇ ಸಿಬಿಐ ತನಿಖೆ ಎದುರಿಸುವಂತೆ ಸೂಚಿಸಿ ಮಹತ್ವದ ಆದೇಶ ಹೊರಡಿಸಿದೆ.
ಬೆಂಗಳೂರು ಹೈಕೋರ್ಟ್ ವಿಶೇಷ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ವೀರಪ್ಪ ಹಾಗೂ ಸಂಜಯಗೌಡ ಅವರು ಸಿಬಿಐ ಹಾಗೂ ರಾಜ್ಯ ಸರ್ಕಾರದ ವಾದವನ್ನು ಪುರಸ್ಕರಿಸಿದೆ.
ಸಿಬಿಐ ಹಾಗೂ ರಾಜ್ಯ ಸರ್ಕಾರದ ಪರ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು ಸುದೀರ್ಘ ವಾದ ಮಂಡಿಸಿ ನ್ಯಾಯಾಲಯದ ಗಮನ ಸೆಳೆದಿದ್ದರು.
ಈಗಾಗಲೇ ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಯನ್ನು ಕಳೆದ ವರ್ಷದ ನವ್ಹಂಬರ ೫ ರಂದು ರಾಕೇಶ್ ರಂಜನ್ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ ಬಂಧಿಸಿ, ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿಗೆ ಕಳಿಸಿತ್ತು.
ಒಂಬತ್ತು ತಿಂಗಳ ಜೈಲಿನಲ್ಲಿದ್ದ ವಿನಯಗೆ ನಂತರ ಸುಪ್ರೀಂಕೋರ್ಟ್ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ಷರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿತ್ತು.