ಬೆಂಗಳೂರು: ಹೊಸದಾಗಿ ರಾಜ್ಯದಲ್ಲಿ ಕಾಣಿಸಿಕೊಂಡಿದ್ದ ಡೆಲ್ಟಾ ವೈರಸ್ ಸೋಂಕಿತರಿಬ್ಬರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಮೈಸೂರಿನಲ್ಲಿ ಕಾಣಿಸಿ ಕೊಂಡಿದ್ದ ಒಬ್ಬ ವ್ಯಕ್ತಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗಿದೆ. ಈಗ ಅವರು ಚೇತರಿಸಿಕೊಂಡಿದ್ದಾರೆ ಎಂದರು.
ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರಿಗೆ ವೈರಸ್ ಕಾಣಿಸಿಕೊಂಡಿದ್ದು, ಅವರಿಗೂ ಚಿಕಿತ್ಸೆ ಕೊಡುತ್ತಿದ್ದೇವೆ. ಅವರು ಸಹ ಚೇತರಿಸಿಕೊಳ್ಳುತ್ತಿದ್ದಾರೆ. ಇವರ ಸಂಪರ್ಕದಲ್ಲಿರುವ ಮತ್ತ್ಯಾರಿಗೂ ಸೋಂಕು ಹಬ್ಬಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.