ಹುಬ್ಬಳ್ಳಿ-ಧಾರವಾಡ ಸುದ್ದಿ
ಅಧಿಕೃತವಾಗಿ ಬಿಜೆಪಿಗೆ ಹೊರಟ್ಟಿ ಸೇರ್ಪಡೆ

ಅಧಿಕೃತವಾಗಿ ಬಿಜೆಪಿಗೆ ಹೊರಟ್ಟಿ ಸೇರ್ಪಡೆ

ಬಿಜೆಪಿ ಬಾವುಟ ನೀಡಿ ಬರಮಾಡಿಕೊಂಡ ಸಿಎಂ

ಬೆಂಗಳೂರು: ಹಿರಿಯ ನಾಯಕ, ಉತ್ತರ ಕರ್ನಾಟಕದ ಗಟ್ಟಿ ಧ್ವನಿ, ವಿಧಾನ ಪರಿಷತ್ ನಲ್ಲಿ ದಾಖಲೆಯ 45 ವರ್ಷಗಳ ಕಾಲ ಸದಸ್ಯರಾಗಿರುವ ಬಸವರಾಜ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.


ಪರಿಷತ್ ಸಭಾಪತಿ ಹಾಗೂ ಸದಸ್ಯತ್ವಕ್ಕೆ ಹೊರಟ್ಟಿ ನೀಡಿದ ರಾಜೀನಾಮೆ ಅಂಗೀಕಾರವಾದ ಮರುದಿನವೇ ಕಮಲ ಪಾಳೆಯಕ್ಕೆ ಅವರನ್ನು ಸಿಎಂ ಜತೆಗೆ ಸಚಿವರು, ಪಕ್ಷದ ರಾಜ್ಯ ನಾಯಕರು ಇಂದು ಬಿಜೆಪಿ ಬಾವುಟ ನೀಡಿ ಬರಮಾಡಿಕೊಂಡರು.


ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊರಟ್ಟಿಯವರ ಅನುಭವಕ್ಕೆ ತಕ್ಕಂತೆ ಅವಕಾಶ ನೀಡುವ ಬಗ್ಗೆ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ ಎಂದರು.

ಹೊರಟ್ಟಿಯವರ ಸೇರ್ಪಡೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಷ್ಟರಲ್ಲೇ ನಡೆಯಲಿದೆ. ಅವರಯ ಬಂದಿರುವುದರಿಂದ ಬಿಜೆಪಿಗೆ ಆನೆಬಲ ಬಂದಂತಾಗಿದ್ದು, ಉತ್ತರಕರ್ನಾಟಕದಲ್ಲಿ ಪಕ್ಷ ಇನ್ನಷ್ಟು ಸದೃಢವಾಗಲಿದೆ ಎಂದು ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ  ಜಗದೀಶ್ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆರ್ ಅಶೋಕ್, ಅರಗ ಜ್ಞಾನೆಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಸಿದ್ದು ಸವದಿ, ಕಳಕಪ್ಪ ಬಂಡಿ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಇತರರು ಉಪಸ್ಥಿತರಿದ್ದರು.

 

administrator

Related Articles

Leave a Reply

Your email address will not be published. Required fields are marked *