ಉದಯಾಸ್ತಮಾನವೆಂಬೆರಡು ಕೊಳಗ ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ ಆಯುಷ್ಯವೆಂಬ ರಾಶಿ ಅಳೆದು ತೀರದ ಮುನ್ನ ಶಿವನ ನೆನೆಯಿರೆ, ಶಿವನ ನೆನೆಯಿರೆ ಈ ಜನ್ಮ ಬಳಿಕಿಲ್ಲ. ಚೆನ್ನಮಲ್ಲಿಕಾರ್ಜುನದೇವರ ನೆನೆದು ಪಂಚಮಹಾಪಾತಕರೆಲ್ಲರು ಮುಕ್ತಿವಡೆದರಂದು.…
ಬ್ರಹ್ಮನ ನಾವು ಬಲ್ಲೆವು ಬ್ರಹ್ಮನ ನಾವು ಬಲ್ಲೆವು, ವಿಷ್ಣುವ ನಾವು ಬಲ್ಲೆವು, ತೆತ್ತೀಸಕೋಟಿ ದೇವತೆಗಳ ನಾವು ಬಲ್ಲೆವು. ಅದೇನು ಕಾರಣವೆಂದಡೆ, ಇವರು ಹಲವು ಕಾಲ ನಮ್ಮ ನೆರೆಮನೆಯಲ್ಲಿದ್ದರಾಗಿ,…
ಒಬ್ಬರ ಮನ ಒಬ್ಬರ ಮನವ ನೋಯಿಸಿ, ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ? ಚಂದ್ರನು ಗಂಗೆಯ ತಡಿಯಲ್ಲಿದ್ದಡೇನು? ಕಲಂಕ ಬಿಡದಾಯಿತಯ್ಯಾ. ಅದು ಕಾರಣ, ಮನವ ನೋಯಿಸದವನೆ,…