ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಪೂರ್ವಕವಾಗಿ ವಿಶೇಷ ಲೇಸರ್ ಶೋ
ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಅವರಿಂದ ಕಿರು ನಾಟಕ
ಪ್ರಖ್ಯಾತ ಫ್ಯಾಷನ್ ಗುರು ಪ್ರಸಾದ್ ಬಿದ್ದಪ್ಪ ತಂಡದಿಂದ ಸಂಸ್ಕೃತಿ ಹಾಗೂ ಪರಂಪರೆ ಬಿಂಬಿಸುವ ದೇಸಿ ಫ್ಯಾಷನ್ ಷೋ
15 ಕ್ಕೂ ಅಧಿಕ ಮಿಸ್ ಇಂಡಿಯಾ ಸ್ಪರ್ಧಿಗಳ ಕ್ಯಾಟ್ ವಾಕ್
ಧಾರವಾಡ: 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸೆ. 3 ರಂದು ಸಂಜೆ 5 ಗಂಟೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಅಭಿನಂದನಾ ಪೂರ್ವಕವಾಗಿ ವಿಶೇಷ ಲೇಸರ್ ಶೋ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದ್ದು,
ಕೆಸಿಡಿ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಧಕರಿಗೆ ಹಾಗೂ ಯೋಧರಿಗೆ ಸನ್ಮಾನ ಮತ್ತು ಭವ್ಯ ಪರಂಪರೆ ಬಿಂಬಿಸುವ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಖ್ಯಾತ ಚಿತ್ರ ಸಾಹಿತಿ ವಿ ನಾಗೇಂದ್ರ ಪ್ರಸಾದ್ ಅವರಿಂದ ಕಿರು ನಾಟಕ ಹಾಗೂ ಗಾಯಕಿ ಎಂ ಡಿ ಪಲ್ಲವಿ ಮತ್ತು ಇಂಡಿಯನ್ ಐಡಲ್ 18ರ ವಿಜೇತ ಗಾಯಕ ಸಲ್ಮಾನ್ ಅಲಿ ಅವರಿಂದ ಸಂಗೀತ ಸಂಜೆ ಆಯೋಜಿಸಲಾಗಿದೆ.
ಫ್ಯಾಷನ್ ಷೋ: ಪ್ರಖ್ಯಾತ ಫ್ಯಾಷನ್ ಗುರು ಪ್ರಸಾದ್ ಬಿದ್ದಪ್ಪ ಅವರ ತಂಡದಿಂದ ಸಂಸ್ಕೃತಿ ಹಾಗೂ ಪರಂಪರೆ ಬಿಂಬಿಸುವ ದೇಸಿ ಸೀರೆಗಳಾದ ಇಳಕಲ್, ಮೊಳಕಾಲ್ಮೂರು, ಮೈಸೂರು ಸೀರೆಗಳನ್ನು ತೊಟ್ಟು 15 ಕ್ಕೂ ಅಧಿಕ ಮಿಸ್ ಇಂಡಿಯಾ ಸ್ಪರ್ಧಿಗಳು ಹೆಜ್ಜೆ ಹಾಕಲಿದ್ದಾರೆ. ಕಾರ್ಯಕ್ರಮ ತಯಾರಿ ಭರ್ಜರಿಯಿಂದ ಸಾಗುತ್ತಿದ್ದು, ಎಲ್ಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಫೌಂಡೇಶನ್ ಅಧ್ಯಕ್ಷ ಆನಂದ ಕಲಾಲ್ ಮನವಿ ಮಾಡಿದ್ದಾರೆ.